ಊರೆಂಬ ಹರಿಗೋಲು: ಚಂದ್ರಮತಿ ಸೋಂದಾ ಸರಣಿ
ಗಣರಾಜ್ಯೋತ್ಸವ ಮತ್ತು ಸ್ವಾತಂತ್ರ್ಯ ದಿನಾಚರಣೆಗಳಂದು ನಮಗೆಲ್ಲ ಸಂಭ್ರಮವೋ ಸಂಭ್ರಮ. ಹಿಂದಿನ ದಿನವೇ ನಮ್ಮ ಮೇಷ್ಟ್ರು ಯಾರ‍್ಯಾರಿಗೆ ಏನೇನು ಕೆಲಸ ಎಂದು ತಿಳಿಸುತ್ತಿದ್ದರು. ಸ್ವಲ್ಪ ದೊಡ್ಡ ಮಕ್ಕಳು ಹಿಂದಿನ ಸಂಜೆಯೇ ತಮ್ಮನೆಯ ಹಿತ್ತಲಿನಲ್ಲಿರುವ ಮಾವಿನ ಗಿಡದಿಂದ ಮಾವಿನ ಸೊಪ್ಪನ್ನು ತಂದು ಅದನ್ನು ದಾರದಲ್ಲಿ ಪೋಣಿಸಿ ಶಾಲೆಯ ಬಾಗಿಲಿಗೆ ಕಟ್ಟುತ್ತಿದ್ದರು. ಹೆಚ್ಚಾಗಿ ಇದು ಗಂಡುಮಕ್ಕಳ ಕೆಲಸವಾಗಿತ್ತು. ಆಗ ನಮಗೆ ಸಮವಸ್ತ್ರದ ಕಟ್ಟುಪಾಡಿರಲಿಲ್ಲ. ಹಾಗಾಗಿ ನಮ್ಮ ಬಳಿ ಇರುವ ಒಳ್ಳೆಯ ಬಟ್ಟೆಯನ್ನು ಧರಿಸಿ, ಎಂಟುಗಂಟೆಗೆ ನಾವು ಶಾಲೆಯಲ್ಲಿರುತ್ತಿದ್ದೆವು.
ಡಾ. ಚಂದ್ರಮತಿ ಸೋಂದಾ ಬರೆಯುವ “ಮಾತು ಮಂದಲಿಗೆ” ಸರಣಿ