Advertisement
‘ಈ ಹೊತ್ತಿಗೆ ಪ್ರಶಸ್ತಿ’ಗಾಗಿ ಕಥಾ ಸಂಕಲನ ಮತ್ತು ಕವನ ಸಂಕಲನಗಳಿಗೆ ಆಹ್ವಾನ

‘ಈ ಹೊತ್ತಿಗೆ ಪ್ರಶಸ್ತಿ’ಗಾಗಿ ಕಥಾ ಸಂಕಲನ ಮತ್ತು ಕವನ ಸಂಕಲನಗಳಿಗೆ ಆಹ್ವಾನ

2023ರ ಸಾಲಿನ ‘ಈ ಹೊತ್ತಿಗೆ ಪ್ರಶಸ್ತಿ’ಗಾಗಿ ಕನ್ನಡದ ಅಪ್ರಕಟಿತ ಕಥಾ ಸಂಕಲನಗಳನ್ನು ಮತ್ತು ಅಪ್ರಕಟಿತ ಕವನ ಸಂಕಲನಗಳನ್ನು ಆಹ್ವಾನಿಸುತ್ತಿದ್ದೇವೆ.

ವಿಜೇತ ಕಥಾ ಸಂಕಲನ ಮತ್ತು ಕವನ ಸಂಕಲನಕ್ಕೆ ತಲಾ 10,000 (ಹತ್ತು ಸಾವಿರ) ರೂಪಾಯಿ ನಗದು ಬಹುಮಾನ ಮತ್ತು ಪ್ರಶಸ್ತಿ ಫಲಕ ನೀಡಲಾಗುವುದು.

ನಿಯಮಗಳು :

1. ಕಥೆಗಳು/ಕವನಗಳು ಸ್ವತಂತ್ರವಾಗಿರಬೇಕು. ಅನುವಾದಿತ ಕಥೆ/ಕವನಗಳಿರಕೂಡದು.
2. ಕಥಾ ಸಂಕಲನವು 8ರಿಂದ 10 ಕಥೆಗಳನ್ನು ಒಳಗೊಂಡಿರಬೇಕು.
3. ಕವನ ಸಂಕಲನವು 35-40 ಕವನಗಳನ್ನು ಒಳಗೊಂಡಿರಬೇಕು.
4. ಕಂಪ್ಯೂಟರಿನಲ್ಲಿ ಟೈಪ್ ಮಾಡಿ, ಪ್ರಿಂಟ್ ತೆಗೆಸಿ ಬೈಂಡ್ ಮಾಡಿದ ಸಂಕಲನದ ಮೂರು ಪ್ರತಿಗಳನ್ನು ಈ ಹೊತ್ತಿಗೆಯ ಅಂಚೆ ವಿಳಾಸಕ್ಕೆ ಕಳುಹಿಸಿಕೊಡಬೇಕು.
5. ಕವಿಗಳು / ಕಥೆಗಾರರು ಪ್ರತ್ಯೇಕ ಹಾಳೆಯಲ್ಲಿ ತಮ್ಮ ಹೆಸರು, ಸಂಕಲನದ ಹೆಸರು, ಸಂಪೂರ್ಣ ವಿಳಾಸ, ಮೊಬೈಲ್ ಸಂಖ್ಯೆಯನ್ನು ಬರೆದಿರಬೇಕು. ಸಂಕಲನದ ಯಾವುದೇ ಪುಟಗಳಲ್ಲಿ ಲೇಖಕರ ಹೆಸರು ಇರಕೂಡದು.
6. ಪ್ರಶಸ್ತಿ ಘೋಷಣೆಯಾದ 30 ದಿನಗಳಲ್ಲಿ ಪ್ರಶಸ್ತಿ ಪಡೆದ ಸಂಕಲನವು ಮುದ್ರಣಗೊಳ್ಳಬೇಕು. ಕೃತಿ ಮುದ್ರಣಗೊಂಡರೆ ಮಾತ್ರ ಘೋಷಿತ ಬಹುಮಾನದ ಮೊತ್ತ ಹಾಗು ಪ್ರಶಸ್ತಿ ಫಲಕವು ಈ ಹೊತ್ತಿಗೆಯ ಹೊನಲು ಸಮಾರಂಭದಲ್ಲಿ ಸಲ್ಲುತ್ತದೆ.
7. ಪ್ರಶಸ್ತಿ ಪಡೆದ ಕೃತಿಯನ್ನು ಮುದ್ರಿಸುವಾಗ ಮುಖಪುಟ ಹಾಗು ಪುಸ್ತಕದ ಒಳ ಪುಟದಲ್ಲಿ ‘ಈ ಹೊತ್ತಿಗೆ (ಕಥಾ/ಕಾವ್ಯ) ಪ್ರಶಸ್ತಿ ವಿಜೇತ ಕೃತಿ’ ಎಂದು ಮುದ್ರಿಸಿರಬೇಕು.
8. ಹಸ್ತಪ್ರತಿಗಳನ್ನು ಮರಳಿಸಲಾಗುವುದಿಲ್ಲವಾದ್ದರಿಂದ ನಿಮ್ಮ ಬಳಿ ಅದರ ಪ್ರತಿಯನ್ನು ಕಾಯ್ದಿರಿಸಿಕೊಳ್ಳಿ.
9. ನಿಮ್ಮ ಅಪ್ರಕಟಿತ ಕಥಾ ಸಂಕಲನ, ಕವನ ಸಂಕಲನ ನಮಗೆ ತಲುಪಲು ಕೊನೆಯ ದಿನಾಂಕ : 25 ನವೆಂಬರ್ 2022*
ಈ ಹೊತ್ತಿಗೆಯ ತೀರ್ಮಾನವೇ ಅಂತಿಮ.
2023ರ ಮಾರ್ಚಲ್ಲಿ ನಡೆಯುವ ಈ ಹೊತ್ತಿಗೆಯ ಹೊನಲು ಸಮಾರಂಭದಲ್ಲಿ ವಿಜೇತರಿಗೆ ಪ್ರಶಸ್ತಿಯನ್ನು ನೀಡಲಾಗುವುದು.

ಹಸ್ತಪ್ರತಿ ಕಳುಹಿಸಲು ವಿಳಾಸ:

ಈ ಹೊತ್ತಿಗೆ,
#65 , ಮುಗುಳ್ನಗೆ, 3ನೇಯ ಅಡ್ಡರಸ್ತೆ ,
ಪಿ.ಎನ್.ಬಿ. ನಗರ, ಕೋಣನಕುಂಟೆ,
ಬೆಂಗಳೂರು – 560062
ಸಂಪರ್ಕ ಸಂಖ್ಯೆ: 9611782621

About The Author

ಕೆಂಡಸಂಪಿಗೆ

ಕೆಂಡಸಂಪಿಗೆ ಸಂಪಾದಕೀಯ ತಂಡದ ಆಶಯ ಬರಹಗಳು ಇಲ್ಲಿರುತ್ತವೆ

Leave a comment

Your email address will not be published. Required fields are marked *

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ