Advertisement
ರಂಜಾನ್ ದರ್ಗಾ

ಕನ್ನಡದ ಹಿರಿಯ ಲೇಖಕರು ಮತ್ತು ಪತ್ರಕರ್ತರು. ಬಂಡಾಯ ಕಾವ್ಯದ ಮುಂಚೂಣಿಯಲ್ಲಿದ್ದವರು. ವಿಜಾಪುರ ಮೂಲದ ಇವರು ಧಾರವಾಡ ನಿವಾಸಿಗಳು. ಕಾವ್ಯ ಬಂತು ಬೀದಿಗೆ (ಕಾವ್ಯ -೧೯೭೮), ಹೊಕ್ಕಳಲ್ಲಿ ಹೂವಿದೆ (ಕಾವ್ಯ), ಸಾಹಿತ್ಯ ಮತ್ತು ಸಮಾಜ, ಅಮೃತ ಮತ್ತು ವಿಷ, ನೆಲ್ಸನ್ ಮಂಡೇಲಾ, ಮೂರ್ತ ಮತ್ತು ಅಮೂರ್ತ, ಸೌಹಾರ್ದ ಸೌರಭ, ಅಹಿಂದ ಏಕೆ? ಬಸವಣ್ಣನವರ ದೇವರು, ವಚನ ಬೆಳಕು, ಬಸವ ಧರ್ಮದ ವಿಶ್ವಸಂದೇಶ, ಬಸವಪ್ರಜ್ಞೆ, ನಡೆ ನುಡಿ ಸಿದ್ಧಾಂತ, ಲಿಂಗವ ಪೂಜಿಸಿ ಫಲವೇನಯ್ಯಾ, ಜಾತಿ ವ್ಯವಸ್ಥೆಗೆ ಸವಾಲಾದ ಶರಣರು, ಶರಣರ ಸಮಗ್ರ ಕ್ರಾಂತಿ, ಬಸವಣ್ಣ ಮತ್ತು ಅಂಬೇಡ್ಕರ್, ಬಸವಣ್ಣ ಏಕೆ ಬೇಕು?, ಲಿಂಗವಂತ ಧರ್ಮದಲ್ಲಿ ಏನುಂಟು ಏನಿಲ್ಲ?, ದಾಸೋಹ ಜ್ಞಾನಿ ನುಲಿಯ ಚಂದಯ್ಯ (ಸಂಶೋಧನೆ) ಮುಂತಾದವು ಅವರ ಪ್ರಕಟಿತ ಕೃತಿಗಳಾಗಿವೆ.  ಕರ್ನಾಟಕ ಸರ್ಕಾರದ ರಾಷ್ಟ್ರೀಯ ಬಸವ ಪುರಸ್ಕಾರ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಮಾಧ್ಯಮ ಅಕಾಡೆಮಿ ಗೌರವ ಪ್ರಶಸ್ತಿ ಮುಂತಾದ ೫೨ ಪ್ರಶಸ್ತಿಗಳಿಗೆ ಭಾಜನರಾದ ರಂಜಾನ್ ದರ್ಗಾ ಅವರು ಬಂಡಾಯ ಸಾಹಿತ್ಯ ಪರಂಪರೆಯ ಶಕ್ತಿಶಾಲಿ ಕವಿಗಳಲ್ಲಿ ಒಬ್ಬರು. ಅಮೆರಿಕಾ, ನೆದರ್‌ಲ್ಯಾಂಡ್ಸ್, ಲೆಬನಾನ್, ಕೆನಡಾ, ಫ್ರಾನ್ಸ್, ಆಸ್ಟ್ರೇಲಿಯಾ ಸೇರಿದಂತೆ ಇನ್ನೂ ಹಲವು ದೇಶಗಳಲ್ಲಿ ಶರಣ ಸಂಸ್ಕೃತಿ, ಶಾಂತಿ ಮತ್ತು ಮಾನವ ಏಕತೆ ಕುರಿತು ಉಪನ್ಯಾಸ ನೀಡಿದ್ದಾರೆ.

ಮರೆಯಲಾಗದ ಆ ನಾಲ್ಕು ರಾತ್ರಿಗಳು

ಹಗಲಿನಲ್ಲಿ ಎಲ್ಲೆಲ್ಲೋ ಹಂಚಿಹೋಗಿದ್ದ ಇವರನ್ನೆಲ್ಲ ಹೀಗೆ ಒಂದೇ ಸೂರಿನಡಿ ಸೇರಿಸಿದ್ದ ಇರುಳು ಎಷ್ಟೊಂದು ಬಲಶಾಲಿ ಅಂದುಕೊಳ್ಳುತ್ತಲೇ ಸಣ್ಣಗೆ ತೂಕಡಿಕೆ. ಅಲ್ಯಾರೋ ಕೆಮ್ಮಿದ ಸದ್ದು. ಮತ್ಯಾರೋ ಮಗುವನ್ನು ತಟ್ಟಿದ ಸಪ್ಪಳ. ಇನ್ಯಾರೋ ಯಾರಿಗೋ ಗದರಿದ ದನಿ. ಮಧ್ಯೆ-ಮಧ್ಯೆ ಹೆಗ್ಗಣಗಳ ಓಡಾಟ. ಅಪರೂಪಕ್ಕೆ ರೈಲಿನ ಕೂಗು. ಮೈಕಿನ ಅನೌನ್ಸ್‌ಮೆಂಟು… ಎಲ್ಲವೂ ಬೇರಾವುದೋ ಲೋಕದ್ದು ಎನ್ನುವಂಥ ಮಂಪರು. ಮುಂಜಾನೆ ಎಚ್ಚರಾದಾಗ ಪಕ್ಕದಲ್ಲೇ ಹಮಾಲಿ ಮಂದಿಯ ಗುಂಪೊಂದು ಸೇರಿತ್ತು.

Read More

ಕ್ಲಾಸ್‌ಮೇಟ್ಸುಗಳ ಮಕ್ಕಳು ಮತ್ತು ಫಯಾಜ್‌ನ ಪುಲಾವು

‘ಮದುವೆಯಾದ ನಂತರ ಗಂಡು ಅಡುಗೆ ಮಾಡುವುದು ಅವಮಾನ, ಅದೇನಿದ್ದರೂ ಹೆಂಡತಿಯ ಕೆಲಸ’ ಎಂಬ ಅರೆಬೆಂದ ಅಲಿಖಿತ ಕಟ್ಟುಪಾಡೊಂದು ಉಂಟಲ್ಲ, ಅದು ಮೌಢ್ಯ. ಮದುವೆಯಾದ ನಂತರವೂ ಅಡುಗೆ ಕೆಲಸಗಳನ್ನು ಮಾಡುವುದು ಖಂಡಿತ ಅವಮಾನದ ಸಂಗತಿಯಲ್ಲ. ಬದಲಿಗೆ, ಪ್ರೀತಿ ಹೆಚ್ಚಿಸುವ ಸಂಗತಿ. ಕುಟುಂಬವೊಂದು ಹೀಗಿದ್ದಾಗ, ಅದು ಮಕ್ಕಳ ಯೋಚನಾ ಲಹರಿಯ ಮೇಲೂ ಪರಿಣಾಮ ಬೀರುತ್ತದೆ.  ಅಪ್ಪನ ಈ…

Read More

ಆಕ್ಸಿಡೆಂಟಿನ ಆಲದಮರ ಮತ್ತು ತೇಜಸ್ವಿಯ ‘ಮಾಯಾಮೃಗ’

ಗೆಳೆಯರೆಲ್ಲ ಸೇರಿ ಏನೇನೋ ಸವಾಲು ಹಾಕಿಕೊಂಡು, ಅವರಲ್ಲಿ ಇಬ್ಬರು ಸ್ಮಶಾನಕ್ಕೆ ಹೋಗುವುದು, ದೆವ್ವ ಗೆಳೆಯನ ವೇಷ ಧರಿಸಿ ಬಂದರೆ ಪತ್ತೆ ಮಾಡಲೆಂದು ಕೋಡ್‌ವರ್ಡ್ ನಿಕ್ಕಿ ಮಾಡಿಕೊಳ್ಳುವುದು, ನಂತರ ಆಗುವ ಅವಾಂತರಗಳು, ಬೂದಿಯಲ್ಲಿ ಮುಳುಗೆದ್ದ ಕಜ್ಜಿ ನಾಯಿಯೊಂದು ಫಾಲೋ ಮಾಡುವುದು, ಧೈರ್ಯವಂತನೊಬ್ಬ ಸವಾಲು ಸ್ವೀಕರಿಸಿ ಮಧ್ಯರಾತ್ರಿಯಲ್ಲಿ ಸುಡುಗಾಡಿಗೆ ಹೋಗಿ, ಗುರುತಿಗೆಂದು ಗೂಟ ಬಡಿಯುವಾಗ ತನ್ನ ಬಟ್ಟೆಯನ್ನೂ ಸೇರಿಸಿ ಬಡಿದು…

Read More

ಗೋಡೆಯಿಂದ ಹಾರಿದ ಹಾವುಗಳು ಮತ್ತು ಗೋಡೆಗಂಟಿದ ಮನುಷ್ಯರು

ಊರಿನ ಪ್ರತಿ ಬೀದಿಯನ್ನೂ ಅಲಂಕರಿಸಿದ್ದ ಹೊಗೆಸೊಪ್ಪಿನ ಬ್ಯಾರಲ್‌ಗಳ ಪೈಕಿ ವರ್ಷಕ್ಕೆ ಒಂದಾದರೂ ಬೆಂಕಿಯೊಳಗೆ ಕುಣಿಯುವುದು ಕಾಯಂ ಆದಮೇಲೆ, ಅವುಗಳನ್ನು ಊರಿಂದ ಆಚೆ ಹಾಕುವ ಮಹಾ ಸಂಚಿಕೆಗಳು ಶುರುವಾದವು. ಫಯರ್ ಆಫೀಸಿನವರ ಎಚ್ಚರಿಕೆಗಳು, ಪೊಲೀಸಿನವರ ಖಾರದ ಮಾತು, ಬ್ಯಾರಲ್ ಸುತ್ತಮುತ್ತಲ ಮನೆಗಳ ಮಂದಿಯ ತಕರಾರುಗಳ ಫಲವಾಗಿ ಬಹುತೇಕ ಬ್ಯಾರಲ್‌ಗಳು ಸದ್ದಿಲ್ಲದಂತೆ ಊರಿಂದ ಆಚೆ ನಡೆದವು. ಹಾಗಂತ ಸಮಸ್ಯೆಗಳೂ ಊರಾಚೆ ನಡೆದು ಹೋದವು ಎನ್ನುವ ಹಾಗಿಲ್ಲ. ‘ಸೊಗದೆ’ ಅಂಕಣದಲ್ಲಿ ಸಹ್ಯಾದ್ರಿ ನಾಗರಾಜ್  ಹೊಗೆಸೊಪ್ಪು ಬ್ಯಾರಲ್ ಗಳ ಕುರಿತು ಬರೆದಿದ್ದಾರೆ. 

Read More

ಕವಿಶೈಲದ ಹುಲಿಯೂ ದೂರದ ಕುದುರೆಮುಖವೂ

ಭಯವನ್ನು ಅನಾಮತ್ತಾಗಿ ಎತ್ತಿ ಬೆನ್ನ ಹಿಂದಕ್ಕೆ ಬಿಸಾಡಿ, ಕವಿಶೈಲದ ಕಲ್ಲುಬೆಂಚುಗಳ ಬಳಿ ನಿಂತು ಕಣಿವೆಯ ಕಡೆಗೆ ಕಣ್ಣು ಹಾಯಿಸಿದರೆ, ಅಸ್ಪಷ್ಟ ಬೆಳಕುಗಳಲ್ಲಿ ಕಂಡೂ ಕಾಣದಂತಿದ್ದ ದಟ್ಟ ಕಾಡು. ಬೆಳಗ್ಗೆ ಕಂಡಿದ್ದ ನೋಟದ ಅಂದಾಜಿನ ಮೇರೆಗೆ ಮೆಲ್ಲಗೆ ಗೆರೆಗಳನ್ನು ಒಂದೊಂದಾಗಿ ಜೋಡಿಸಿಕೊಳ್ಳುತ್ತ ಹೋದಂತೆ ರೋಮಾಂಚನ. ಅಷ್ಟೊಂದು ಅಗಾಧ ಕಾಡನ್ನು ಕತ್ತಲಲ್ಲಿ ಕಣ್ತುಂಬಿಕೊಳ್ಳುವುದೊಂದು ಅದ್ಭುತ ಪುಳಕ. ನಿಮ್ಮ ಕಂಗಳು ಬರೀ ಕಂಗಳಾಗಿಯಷ್ಟೇ ಉಳಿಯದಂಥ ಜಾದೂ ಅದು.
ಸಹ್ಯಾದ್ರಿ ನಾಗರಾಜ್‌ ಬರೆಯುವ ‘ಸೊಗದೆ’ ಅಂಕಣ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ