Advertisement

Tag: ಕಾದಂಬರಿ

ಬದುಕೆಂದರೆ ಹೀಗೇನೆ….

ಮನೆ ಭಾಗವಾದಾಗ ಮಧ್ಯಕ್ಕೆ ಪೂರ್ತಿ ಗೋಡೆ ಕಟ್ಟದೆ ಅಟ್ಟದವರೆಗೆ ಮಾತ್ರ ಕಟ್ಟಿದ್ದರಿಂದ‌ ಅಟ್ಟ ಎಲ್ಲರಿಗೂ ಒಂದೆ ಇತ್ತು ಹಾಗಾಗಿ ಪಕ್ಕದ ಮನೆಯಲ್ಲಿ ಮಾತಾಡುವುದೆಲ್ಲ ಪಕ್ಕದಲ್ಲೆ ಮಾತಾಡಿದಷ್ಟು ಸ್ಪಷ್ಟವಾಗೆ ಕೇಳುತ್ತಿತ್ತು. ಸಾವಿ ನಿದ್ದೆ ಬಾರದೆ ಗಂಡನನ್ನು ಹೇಗಾದರು ಮಾಡಿ ಸೂಳೆ ಸಹವಾಸ ಬಿಡಿಸಿ ನನ್ನ ಕಡೆ ಸೆಳೆಯಬೇಕೆಂದು ಯೋಚಿಸುತ್ತಿದ್ದಳು. ಪಕ್ಕದ ಮನೆಯಲ್ಲಿ ಮಾವ ಅಕ್ಕಂದಿರು ತನ್ನ ಗಂಡನ ಬಗ್ಗೆ ಪಿಸುಗುಡುವುದು ಗೊತ್ತಾಗುತಿತ್ತು. ಸಾವಿತ್ರಿ ತನಗರಿವಿಲ್ಲದೆ ಶೋಕಿಸುತ್ತ ಮಗಳು ಕನಕಳನ್ನು ತಬ್ಬಿ ಕಣ್ಣು ಮಿಟುಕಿಸಿದಾಗ ಕಣ್ತುಂಬಿದ್ದ ಅಶ್ರು ದಳದಳನೆ ಇಳಿದು ಎಣ್ಣೆ ಜಿಡ್ಡು ಮೆತ್ತಿ ಕೊಳಕಾಗಿದ್ದ ತಲೆದಿಂಬು ಸಹ ಅದನ್ನು ಹೀರದೆ ಕೆಳಕ್ಕೆ ಹರಿದವು.
ನಗೋಲತೆ ಬರೆದ “ಬೆದ್ಲು ಬದ್ಕು” ಕಾದಂಬರಿಯ ಕೆಲವು ಪುಟಗಳು ನಿಮ್ಮ ಓದಿಗೆ

Read More

ಪ್ರಜ್ಞೇನ ಸುಪ್ತಪ್ರಜ್ಞೆ ಓವರ್ ಟೇಕ್ ಮಾಡಿದೆ…..

ಮನಸ್ಸಿನ ಅಹಂಕಾರ ಮೊದಲು ಅಮಲು ಆನಂತರ ಚಟ ನಂತರ ಅಧೋಗತಿ. ಈ ಅಧೋಗತಿ ಎಂಬ ಹಂತ ಅಲ್ಲಿಯವರೆಗೆ ವ್ಯಕ್ತಿ ಪರಿವರ್ತನೆ ಆಗಲಿಲ್ಲ ಎಂದರೆ ಆತ ವೃತ್ತಿ, ವೈಯಕ್ತಿಕ ಎರಡೂ ಕಡೆ ಮುಳುಗಿದಂತೆಯೇ ಸರಿ. ಇಲ್ಲಿ ಮೊಹಂತಿ ಹೆಂಡತಿಗೆ ವಿಚ್ಛೇದನ ಕೊಡುತ್ತಾನೆ. ಆಕೆ ನೀರಲ್ಲಿ ಮುಳುಗಿ ಆತ್ಮಹತ್ಯೆ ಮಾಡಿಕೊಳ್ಳಲು ನೇರ ಕಾರಣನಾಗುತ್ತಾನೆ. ಆನಂತರ ಇತರ ಮಕ್ಕಳನ್ನು ನೋಡಿ ನನಗೂ ಇದ್ದಿದ್ದರೆ ಅನ್ನುವುದು, ಅವಳು ಇನ್ನೊಮ್ಮೆ ಬಂದರೆ ಚೆನ್ನಾಗಿ ನೋಡಿಕೊಳ್ಳುವುದಾಗಿ ಕೇವಲ ಮನಸ್ಸಿನಲ್ಲಿ ಮಾತ್ರ ತೀರ್ಮಾನ ಮಾಡಿಕೊಂಡರೆ ಸಾಕೆ ಅದನ್ನು ಬಾಯಂಗಳದಲ್ಲೇ ಇರಿಸಿಕೊಂಡರೆ ಎದುರಿಗಿರುವವರ ಮನದಂಗಳ ತಲುಪುವುದು ಹೇಗೆ?
ಕೆ.ವಿ. ತಿರುಮಲೇಶರ ಕಾದಂಬರಿಗಳ ಕುರಿತು ವಿಶ್ಲೇಷಿಸಿದ್ದಾರೆ ಸುಮಾವೀಣಾ

Read More

“ಹಸ್ತಿನಾವತಿ”: ಇದು ಭಾರತದ ಕಥೆ….

ಆ ಚುನಾವಣೆಯಲ್ಲಿ ಸಂಜಯ್ ಸರ್ಕಾರ್ ಸ್ಪರ್ಧಿಸಿದ್ದರೆ ಬಹುಮತದಿಂದ ಗೆದ್ದು ಬರುತ್ತಿದ್ದರು. ಅವರು ಆ ಕೆಲಸ ಮಾಡಲಿಲ್ಲ. ನ್ಯಾಷನಲ್ ಪಾರ್ಟಿಯೇ ಮತ್ತೆ ಅಧಿಕಾರಕ್ಕೆ ಬರುವತನಕ ಕಾದರು. ನಂತರ ಸರ್ಕಾರದ ಲೋಪಗಳನ್ನು ಎತ್ತಿ ತೋರಿದರು. ನ್ಯಾಷನಲ್ ಪಾರ್ಟಿಯ ಸರ್ಕಾರಕ್ಕೆ ಒಂದು ವರ್ಷವಾಗುತ್ತಿದ್ದಂತೆ, ಸಂಜಯ್ ಸರ್ಕಾರ್ ತಮ್ಮ ಹೊಸ ಪಕ್ಷವನ್ನು ಹುಟ್ಟುಹಾಕಿದರು. ಅದಕ್ಕೆ ಮಾತೃಭೂಮಿ ಎಂದು ಹೆಸರಿಟ್ಟರು. ಸಂಜಯ್ ಸರ್ಕಾರ್ ಜತೆ ಹೋರಾಟದ ಉದ್ದಕ್ಕೂ ಜತೆಗಿದ್ದ ಚಿದಾನಂದ ಪಾಂಡೆಯನ್ನು ಪಕ್ಷದ ಅಧ್ಯಕ್ಷರೆಂದು ಘೋಷಿಸಿದರು.
ನೆನ್ನೆಯಷ್ಟೇ ಬಿಡುಗಡೆಯಾದ ಜೋಗಿಯವರ ಕಾದಂಬರಿ “ಹಸ್ತಿನಾವತಿ”ಯ ಕೆಲವು ಪುಟಗಳು ನಿಮ್ಮ ಓದಿಗೆ

Read More

ಪಾಗಾರದಲ್ಲೊಂದು ಸೃಜನಾತ್ಮಕ ಕಲಾಕೃತಿ

ಆಯಾ ಕಾಲಕ್ಕನುಗುಣವಾಗಿ ಲೇಖಕಿ ಸೂಕ್ಷ್ಮ ಕುಸುರಿಯ ನೇಯ್ಗೆಯಿಂದ ಕಲಾತ್ಮಕವಾಗಿ ನಿರ್ಮಿಸಿರುವ ಪರಿ ಓದುಗರನ್ನು ಕೈಯ್ಯಲ್ಲಿ ಹಿಡಿದ ಪುಸ್ತಕ ಕೆಳಗಿಡದಂತೆ ಸೆಳೆಯುತ್ತದೆ. ಕಾದಂಬರಿಯ ಘಟನೆಗಳ ಕಾಲಮಾನ, ಅದಕ್ಕನುಗುಣವಾಗಿ ಒಂದೊಂದೂ ಪಾತ್ರಗಳಲ್ಲಿ ಲೇಖಕಿ ಪರಕಾಯ ಪ್ರವೇಶ ಮಾಡಿದಂತೆ ಕಡೆದಿಟ್ಟ ಪಾತ್ರ ಚಿತ್ರಣವು ಓದುಗರ ಮನೋ ಭೂಮಿಕೆಯಲ್ಲೂ ಜೀವಂತವಾಗಿ ನೆಲೆಸಿ ಭಾವನೆಗಳೊಂದಿಗೆ ಸ್ಪಂದಿಸುತ್ತವೆ. ಮಳೆಗಾಲದಲ್ಲಿ ಪಾಚಿ ಕಟ್ಟಿಕೊಳ್ಳುವ ಮನೆಯ ಸುತ್ತಲಿನ ಕಲ್ಲಿನ ಪಾಗರವನ್ನು ಲೇಖಕಿ ಒಂದು ರೂಪಕದಂತೆ ಬಳಸಿಕೊಂಡಿದ್ದು ಕಾದಂಬರಿಯಲ್ಲಿ ಪಾಗಾರದ ಪ್ರಸ್ತಾಪ, ಅದರ ಪಾಚಿ ಕೂಡ ಅಷ್ಟೇ ಕಲಾತ್ಮಕವಾಗಿ ಮೂಡಿ ಬಂದಿದೆ.
ಮಿತ್ರಾ ವೆಂಕಟ್ರಾಜ ಅವರ ʻಪಾಚಿಗಟ್ಟಿದ ಪಾಗಾರʼ ಕಾದಂಬರಿಯ ಕುರಿತು, ಲೇಖಕಿ ಕೆ.ಆರ್.ಉಮಾದೇವಿ ಉರಾಳ ಅವರು ತಮ್ಮ ಅನಿಸಿಕೆ ವ್ಯಕ್ತಪಡಿಸಿದ್ದಾರೆ

Read More

ಗಡಂಗು ಹೋಗಿ ಶರಾಬು ಬಂತೂ….

ತಮ್ಮ ಹೊಸ ಗಡಂಗನ್ನು ಜನಪ್ರಿಯಗೊಳಿಸುವ ನಿಟ್ಟಿನಲ್ಲಿ ಯಾದವ ಶೆಟ್ಟರ ಎರಡು ಪ್ರಯತ್ನಗಳು ಇತಿಹಾಸದಲ್ಲಿ ದಾಖಲಾಗತಕ್ಕವೇ ಆಗಿವೆ. ಅವುಗಳಲ್ಲಿ ಮೊದಲನೆಯದು, ಒಂದು ನಿಗದಿತ ದಿನ ತಮ್ಮ ಗಡಂಗಿಗೆ ಯಾರೇ ಬಂದರೂ ಶರಾಬು ಕುಡಿಯುವವರಿಗೆ ಅವರು ಕುಡಿಯುವಷ್ಟು ಶರಾಬನ್ನು ಉಚಿತವಾಗಿ ಕೊಡಲಾಗುವುದೆಂದು ಯಾದವ ಶೆಟ್ಟಿಯವರು ಘೋಷಿಸಿದ್ದು. ಅದೊಂದು ಸ್ಮರಣೀಯ ಮದ್ಯಪಾನೋತ್ಸವವಾಗಿತ್ತು. ಶರಾಬು ಸಮಾರಾಧನೆಯ ದಿನ ಬೆಳಗಿನಿಂದಲೇ ಶರಾಬು ಅಂಗಡಿಗೆ ನುಗ್ಗಲಾರಂಭಿಸಿದ ಊರಿನ ಶರಾಬು ಪ್ರಿಯರು ಬಹಳ ಬೇಗನೇ ‘ಟೈಟ್’ ಆದರು (ಮತ್ತೇರಿಸಿಕೊಂಡರು). ಆಮೇಲೆ ಪರಸ್ಪರ ಬೈದಾಡುತ್ತಾ, ದೂಡಿಕೊಳ್ಳುತ್ತಾ, ಬಡಿದಾಡುತ್ತಾ ಮನಸ್ಸಿನಲ್ಲಿದ್ದ ಕಲ್ಮಶಗಳನ್ನೆಲ್ಲ ಹೊರಗೆ ಹಾಕುತ್ತಾ ಮೆರೆದಾಡಿದರು.
ಬಿ. ಜನಾರ್ದನ ಭಟ್ ಹೊಸ ಕಾದಂಬರಿ “ಗಮ್ಯ”ದಿಂದ ಕೆಲವು ಪುಟಗಳು ನಿಮ್ಮ ಓದಿಗೆ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ