ಬೆದೆಗೆ ಬಂದವಳ ಮೆದುವಾಗಿ ತಳ್ಳಿಬಿಟ್ಟಿದ್ದೆ
ಅವಳು ಬಿಗಿಯಾಗಿ ನನ್ನ ಕೈ ಹಿಡಿದೇ ಇದ್ದಳು. ವಿದಾಯದ ಗಳಿಗೆಯಲ್ಲಿ ಅಮರ ಪ್ರೇಮದ ಮೋಹವೇ…’ನಾಳೆ ಸಿಗುವೆ’ ಎಂದಿದ್ದೆ. ‘ನಿಜವಾಗ್ಲೂ… ನನ್ನ ತಲೆ ಮೇಲೆ ಕೈ ಇಟ್ಟು ಆಣೆ ಮಾಡಿ ಇನ್ನೊಂದ್ಸಲ ಹೇಳಿ’ ಎಂದು ಪ್ರತಿ ಉತ್ತರಕ್ಕೆ ಕಾದಳು. ಕೈ ಹಿಡಿದು ತಲೆ ಮೇಲೆ ಇಟ್ಟುಕೊಂಡಳು. ‘ನಾಳೆ ಅನ್ನೋದು ಕೂಡ ಒಂದು ಸುಳ್ಳು, ಅಂದಾಜು; ಕೇವಲ ನಿರೀಕ್ಷೆ…ಊಹೆ’ ಎಂದೆ. ‘ಅಷ್ಟೆಲ್ಲ ಬೇಡ. ಸಿಕ್ತೀನಿ; ಸಿಗಲ್ಲಾ ಅನ್ನೊದ್ರಲ್ಲಿ ಯಾವ್ದಾದ್ರು ಒಂದನ್ನ ಹೇಳಿ ಏನೂ ಬೇಜಾರು ಮಾಡ್ಕೋದಿಲ್ಲ’ ಎಂದಳು. ನನ್ನ ಅನಂತ ಅಸ್ಪೃಶ್ಯ ಆಕಾಶ ಸರಣಿಯಲ್ಲಿ ಮೊಗಳ್ಳಿ ಗಣೇಶ್ ಬರಹ
Read More